ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
TSK
TSK · ಯಾಜಕಕಾಂಡ 20:5
Treasury of Scripture Knowledge references in ಕನ್ನಡ IRV.
¶ “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”