TSK

TSK · ಯಾಜಕಕಾಂಡ 21:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.

ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.

ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,