ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
TSK
TSK · ಯಾಜಕಕಾಂಡ 22:2
Treasury of Scripture Knowledge references in ಕನ್ನಡ IRV.
¶ “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
¶ “‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.
ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!