ಯಾಜಕಕಾಂಡ 22:25
TSK
ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
TSK
Treasury of Scripture Knowledge references in ಕನ್ನಡ IRV.
ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
¶ ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.
ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.