TSK

TSK · ಯಾಜಕಕಾಂಡ 23:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.

ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.

¶ ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.

ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.