ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.
TSK
TSK · ಯಾಜಕಕಾಂಡ 23:3
Treasury of Scripture Knowledge references in ಕನ್ನಡ IRV.
ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.
¶ ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
¶ “ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.
¶ “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.
ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.