TSK

TSK · ಯಾಜಕಕಾಂಡ 23:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.

¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

“ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.

¶ ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.

ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.

¶ ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.

ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.