¶ ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
TSK
TSK · ಯಾಜಕಕಾಂಡ 24:11
Treasury of Scripture Knowledge references in ಕನ್ನಡ IRV.
ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.
ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.
ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;
“ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.
ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.