“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
TSK
TSK · ಯಾಜಕಕಾಂಡ 25:10
Treasury of Scripture Knowledge references in ಕನ್ನಡ IRV.
ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
¶ “‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?
ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
¶ ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.
ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.
‹ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು”› ಎಂದು ಹೇಳಿದನು.
ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.
¶ ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.