TSK

TSK · ಯಾಜಕಕಾಂಡ 25:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.

ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.

ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.

ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.

ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.

ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.

ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”

ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.

ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.

¶ ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.