TSK

TSK · ಯಾಜಕಕಾಂಡ 25:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.

ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.

ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?

ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.