ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
TSK
TSK · ಯಾಜಕಕಾಂಡ 26:1
Treasury of Scripture Knowledge references in ಕನ್ನಡ IRV.
ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.
¶ “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
ನೀವು ಸ್ತ್ರೀಪುರುಷರ ರೂಪವನ್ನಾಗಲಿ,
¶ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
¶ ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.
ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
¶ “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.