¶ “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.
TSK
TSK · ಯಾಜಕಕಾಂಡ 26:11
Treasury of Scripture Knowledge references in ಕನ್ನಡ IRV.
ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.
ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು.
ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.
ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”
ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.