ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.
TSK
TSK · ಯಾಜಕಕಾಂಡ 26:13
Treasury of Scripture Knowledge references in ಕನ್ನಡ IRV.
ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.
ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”
“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.
ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?