TSK

TSK · ಯಾಜಕಕಾಂಡ 26:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,

ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’”

ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.

‹ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.›