ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
TSK
TSK · ಯಾಜಕಕಾಂಡ 26:32
Treasury of Scripture Knowledge references in ಕನ್ನಡ IRV.
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.
ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
“ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.
ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.
¶ “ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.
ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,