TSK

TSK · ಯಾಜಕಕಾಂಡ 26:37

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.

ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.

ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.

¶ ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”