TSK

TSK · ಯಾಜಕಕಾಂಡ 26:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.

ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,

ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.

ನಿರ್ಜನ ಪ್ರದೇಶದಲ್ಲಿಯೂ, ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ,

ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.

ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.

ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.

ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.

ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.

ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.

ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.

¶ “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.

‹ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.›

¶ ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.

ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.