TSK

TSK · ಯಾಜಕಕಾಂಡ 27:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.

ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.

ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.