TSK

TSK · ಯಾಜಕಕಾಂಡ 27:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.

ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.

ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

¶ ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.

ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.

ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ

ಹೇಗೂ ಪುರುಷರನ್ನು, ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ” ಎಂದು ಆಜ್ಞಾಪಿಸಿ ಕಳುಹಿಸಿದರು.

¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.

ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.

¶ ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.

ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.

ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.