TSK

TSK · ಯಾಜಕಕಾಂಡ 27:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.

“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.

¶ “‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.

ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.

¶ ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,