TSK

TSK · ಯಾಜಕಕಾಂಡ 27:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.

¶ ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

‹ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.›

ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.