TSK

TSK · ಯಾಜಕಕಾಂಡ 3:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.

ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.

ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.

ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.

“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.

ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’

ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.

¶ “‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.

ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.

ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.

ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”

ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.

ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?

¶ “‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.

‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›

ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”

ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.