ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
TSK
TSK · ಯಾಜಕಕಾಂಡ 3:5
Treasury of Scripture Knowledge references in ಕನ್ನಡ IRV.
ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.
¶ “ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.
‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.