ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.
TSK
TSK · ಯಾಜಕಕಾಂಡ 5:15
Treasury of Scripture Knowledge references in ಕನ್ನಡ IRV.
¶ “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
¶ “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.
¶ “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.
“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
¶ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
¶ “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.
ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.
¶ “ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,
¶ “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
¶ “ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
¶ ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.
ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.