TSK

TSK · ಯಾಜಕಕಾಂಡ 6:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.

ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.

ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.