TSK

TSK · ಯಾಜಕಕಾಂಡ 6:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.

¶ ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?

¶ ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.

ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.