¶ ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.
TSK
TSK · ಯಾಜಕಕಾಂಡ 8:14
Treasury of Scripture Knowledge references in ಕನ್ನಡ IRV.
ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.
ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ
ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.
ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.