ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
TSK
TSK · ಯಾಜಕಕಾಂಡ 8:15
Treasury of Scripture Knowledge references in ಕನ್ನಡ IRV.
ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.
¶ “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.
ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.
ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.
ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.