ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
TSK
TSK · ಯಾಜಕಕಾಂಡ 8:21
Treasury of Scripture Knowledge references in ಕನ್ನಡ IRV.
ಆದಿಕಾಂಡ 8:21
TSK
ವಿಮೋಚನಕಾಂಡ 40:16
TSK
ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.
ಯಾಜಕಕಾಂಡ 1:13
TSK
ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
ಯಾಜಕಕಾಂಡ 2:9
TSK
ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
ಯಾಜಕಕಾಂಡ 8:13
TSK
ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.