TSK

TSK · ಯಾಜಕಕಾಂಡ 8:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.

ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.

ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.

¶ ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.

¶ “ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.

¶ ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.

¶ ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,

ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

¶ ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,

¶ ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.