TSK

TSK · ಯಾಜಕಕಾಂಡ 9:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.

ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.

ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.

ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.