TSK

TSK · ಲೂಕನು 1:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”

ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.

¶ ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.

ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.