TSK

TSK · ಲೂಕನು 1:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,

ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,

ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.

ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.

ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.

ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.