ಆದಿಕಾಂಡ 39:2
TSK
ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
TSK
Treasury of Scripture Knowledge references in ಕನ್ನಡ IRV.
ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
¶ ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.
ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.
¶ ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.
¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.