¶ ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
TSK
TSK · ಲೂಕನು 1:7
Treasury of Scripture Knowledge references in ಕನ್ನಡ IRV.
¶ ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.
¶ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
¶ ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.
ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.
¶ ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.
¶ ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.