TSK

TSK · ಲೂಕನು 10:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.

‹ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?”› ಎಂದು ಕೇಳಿದ್ದಕ್ಕೆ,

¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.

ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.