TSK

TSK · ಲೂಕನು 11:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.›

¶ ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,

‹ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?›