ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು.
TSK
TSK · ಲೂಕನು 11:24
Treasury of Scripture Knowledge references in ಕನ್ನಡ IRV.
ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.
ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.
ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.
¶ ‹“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.›
ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, ‹“ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ”› ಅಂದನು.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.