ಅರಣ್ಯಕಾಂಡ 19:16
TSK
ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
TSK
Treasury of Scripture Knowledge references in ಕನ್ನಡ IRV.
ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.›