TSK

TSK · ಲೂಕನು 12:48

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.

‹ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.›

¶ ‹“ದೇವರ ರಾಜ್ಯವು ಹೇಗೆಂದರೆ›‹ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.›

‹ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.›

ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.

ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.

¶ ಸುಳ್ಳಾಡದ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ.