TSK

TSK · ಲೂಕನು 13:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

‹ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.›

‹ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.›

‹“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.›

ಯೇಸು ಅವರ ಕಡೆಗೆ ತಿರುಗಿಕೊಂಡು, ‹“ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.›

ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

‹ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,›‹ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.›