ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
TSK
TSK · ಲೂಕನು 14:13
Treasury of Scripture Knowledge references in ಕನ್ನಡ IRV.
¶ ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.
ನಾನು ಕುರುಡನಿಗೆ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು.
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.
ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
¶ ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು”› ಎಂದು ಹೇಳಿದನು.
‹ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.›
ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,
ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.