ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.
TSK
TSK · ಲೂಕನು 14:16
Treasury of Scripture Knowledge references in ಕನ್ನಡ IRV.
ಯೆಶಾಯ 25:6
TSK
ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
ಯೆರೆಮಿಯ 31:12
TSK
ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
ಮತ್ತಾಯನು 22:2
TSK
‹“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.›
ಲೂಕನು 14:16
TSK
ಯೇಸು ಅವನಿಗೆ ಹೇಳಿದ್ದೇನಂದರೆ, ‹“ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.›
ಪ್ರಕಟನೆ 22:17
TSK
¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.