ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,
TSK
TSK · ಲೂಕನು 14:21
Treasury of Scripture Knowledge references in ಕನ್ನಡ IRV.
ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.
ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.
ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
¶ ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.
‹ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.›
¶ ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.
‹ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.›
‹ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.›
¶ ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
‹ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ”› ಅಂದನು.
“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
¶ ಆಗ ಯೇಸುವು, ‹“ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು”› ಎಂದನು.
ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
¶ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
¶ ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.
¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.