TSK

TSK · ಲೂಕನು 14:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.

‹ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.›

‹ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.›

ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.