ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
TSK
TSK · ಲೂಕನು 15:22
Treasury of Scripture Knowledge references in ಕನ್ನಡ IRV.
ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.
ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.
¶ “ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
‹ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,›
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
¶ ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
¶ ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.
ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
‹ಆದರೂ›‹ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು›‹ಯೋಗ್ಯರಾಗಿರುವುದರಿಂದ›‹ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.›
ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.
¶ ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.