TSK

TSK · ಲೂಕನು 15:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!

‹ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.›

‹ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.›

‹ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.›

ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.

ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.

ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.