TSK

TSK · ಲೂಕನು 16:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.

ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ

ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.

ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.

ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›

‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›

‹ಎಲೈ ಕಪೆರ್ನೌಮೇ›‹ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.›

‹ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?›

‹ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.›

ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.