ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ
TSK
TSK · ಲೂಕನು 16:8
Treasury of Scripture Knowledge references in ಕನ್ನಡ IRV.
ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
‹ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,›
ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, ‹“ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.›
‹ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ”› ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
¶ ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.
ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.